ಅಂಗವೈಕಲ್ಯತೆ ಶಾಪವಲ್ಲ: ಶಾಸಕಿ

ಬೆಳಗಾಯಿತು ವಾರ್ತೆ
ಬಳ್ಳಾರಿ: ದೈಹಿಕ ಅಂಗವೈಕಲ್ಯಕ್ಕಿAತ ಮಾನಸಿಕ ವೈಕಲ್ಯತೆ ದೊಡ್ಡದು. ವಿಶೇಷ ಚೇತನರನ್ನು ಕೀಳರಿಮೆಯಿಂದ ನೋಡದೆ, ಅವರಲ್ಲಿರುವ ವಿಶೇಷ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಹೇಳಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಅಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇವರು ಒಂದು ಅಂಗವನ್ನು ವಿಕಲತೆ ಮಾಡಿದಾಗ ಮತ್ತೊಂದು ವಿಶೇಷ ಸಾಮರ್ಥ್ಯವನ್ನು ನೀಡಿರುತ್ತಾನೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಪೋಷಕರು ಮತ್ತು ಕುಟುಂಬದ ಸದಸ್ಯರು ವಿಶೇಷಚೇತನರನ್ನು ಮೂಲೆ ಗುಂಪು ಮಾಡದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಸರ್ಕಾರವು ಇವರ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತಿದೆ ಎಂದರು.
ಜಿಲ್ಲೆಯ ವಿವಿಧ ಕೈಗಾರಿಕೆಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗ ತಮ್ಮ ಸಾಮಾಜಿಕ ಹೊಣೆಗಾರಿಕೆಯ ಅಡಿ ಇಂತಹ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮವು ಕೇವಲ ಸಹಾಯಧನ ವಿತರಣೆಗೆ ಸೀಮಿತವಾಗದೆ, ವಿಶೇಷ ಚೇತನರ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಸಮಾಜದ ಜವಾಬ್ದಾರಿಯನ್ನು ನೆನಪಿಸುವ ಕಾರ್ಯಕ್ರಮವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿ.ಪಂ ಸಿಇಒ ಸುಮೇರ್ ಮಹಮ್ಮದ್ ಹ್ಯಾರಿಸ್, ಮೇಯರ್ ಪಿ. ಗಾದೆಪ್ಪ,ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ವಿಶೇಷ ಚೇತನರು, ಅವರ ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles