ಬೆಳಗಾಯಿತು ವಾರ್ತೆ
ಬಳ್ಳಾರಿ: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಮಾರ್ಚ್ 18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
*ಅರ್ಹತೆ:
ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ, ಹತ್ತಿರದ ಅಂಚೆ ಕಚೇರಿ ಅಥವಾ ದೂ.08392-266768 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





