36.1 C
Bellary
Tuesday, May 28, 2024

Localpin

spot_img

ಅರಿವು ಯೋಜನೆಯಡಿ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಬಳ್ಳಾರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಮುಖಾಂತರ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
          ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮುಖಾಂತರ  M.B.B.S/ B.D.S/ B Ayush/Bachelor of Architecture/ B.E / Bachelor of Technology Courses Pharmacy, Agriculture Science, Veternary, and Farm Science Courses  ಗಳಿಗೆ ಪ್ರವೇಶ ಹೊಂದುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು.
       ಅರ್ಜಿ ಸಲ್ಲಿಸುವವರು ನಿಗಮದ ವೆಬ್‍ಸೈಟ್ https://kmdconline.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿ ಅದರ ಪ್ರಿಂಟ್‍ಕಾಪಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
       ಬೇಕಾದ ದಾಖಲೆಗಳು: ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್‍ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್‍ಕಾರ್ಡ್, ಅಭ್ಯರ್ಥಿ ಮತ್ತು ತಂದೆ, ತಾಯಿಯ 5 ಭಾವಚಿತ್ರಗಳು, CET/ NEET All Copies & Hall Ticket, Indemnity bond with Notary ಈ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು.
       ಹೆಚ್ಚಿನ ಮಾಹಿತಿಗಾಗಿ ಕಂಟೋನ್‍ಮೆಂಟ್‍ನ ವಿಜಯನಗರ ಕಾಲೋನಿಯ ಹಳೇಮಾರುಕಟ್ಟೆ ರಸ್ತೆ, ನಳಂದ ಕಾಲೇಜ್ ಪಕ್ಕದಲ್ಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, (ನಿ), ಮ ನಂ.47/25 ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles