ಕೊಪ್ಪಳ: ಅಲ್ಬೆಂಡಾಜೋಲ್ ಮಾತ್ರೆಯನ್ನು 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತದೆ. ಮಕ್ಕಳನ್ನು ಜಂತುಹುಳು ನಿವಾರಣೆಗೊಳಪಡಿಸುವುದರಿಂದ ಮಕ್ಕಳಲ್ಲಿ ಆರೋಗ್ಯ ಸ್ಥಿತಿ ಸುಧಾರಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ, ಇವರ ಸಂಯುಕ್ತಾಶ್ರಯದಲ್ಲಿ ನಗರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರದAದು (ನ.23) ಹಮ್ಮಿಕೊಂಡಿದ್ದ ರಾಷ್ಟಿçÃಯ ಜಂತುಹುಳು ನಿವಾರಣೆ ದಿನಾಚರಣೆ ಅಂಗವಾಗಿ ಜಂತುಹುಳು ನಿವಾರಣೆ ಮಾತ್ರೆ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಜಂತುಹುಳು ನಿವಾರಣೆಗೊಳಪಡಿಸುವುದರಿಂದ ರಕ್ತಹೀನತೆಯನ್ನು ನಿಯಂತ್ರಿಸುತ್ತದೆ. ಪೌಷ್ಠಿಕಾಂಶ ಹೀರುವಿಕೆಯನ್ನು ಸುಧಾರಿಸುತ್ತದೆ. ಏಕ್ರಾಗತೆ, ಕಲಿಕಾ ಸಾಮರ್ಥ್ಯ ಹೆಚ್ಚಿಸುತ್ತದೆ ಹಾಗೂ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿಯನ್ನು ಸುಧಾರಿಸಲು ನೆರವಾಗುತ್ತದೆ. ಪರಿಸರದಲ್ಲಿ ಜಂತುಹುಳುಗಳನ್ನು ಕಡಿಮೆ ಮಾಡುವುದರ ಮೂಲಕ ಸಮುದಾಯಕ್ಕೆ ಪ್ರಯೋಜನಕಾರಿಯಾಗಿರುತ್ತದೆ. ಆದ್ದರಿಂದ ಎಲ್ಲಾ ಮಕ್ಕಳು ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕು ಎಂದು ಹೇಳಿದರು.

Previous article“ಉದ್ಘಾಟನೆಗೊಳ್ಳದ ಆರೋಗ್ಯ ಕೇಂದ್ರ: ನಾಯಿಗಳ ವಾಸಸ್ಥಾನ!”
Next articleಪ್ಲಾಸ್ಟಿಕ್ ಬಳಕೆ ನಿಷೇಧ :ಸೂಕ್ತ ಕಾನೂನು ಕ್ರಮ

LEAVE A REPLY

Please enter your comment!
Please enter your name here