22.3 C
New York
Tuesday, August 16, 2022

Buy now

spot_img

“ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು”: ಸಿಎಂ ಬೊಮ್ಮಾಯಿ

ಬೆಂಗಳೂರು: ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು. ನೇಕಾರರಿಗೆ ಅದರ ಲಾಭ ಮುಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ ೮ನೇ ರಾಷ್ಟಿçÃಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಕೈಮಗ್ಗ ನೇಕಾರರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಕೈ ಮಗ್ಗ ಸ್ವಾವಲಂಬನೆಯ ಸಂಕೇತವಾಗಿದೆ. ಸ್ವಾತಂತ್ರ‍್ಯ ಹೋರಾಟದಲ್ಲಿ ಕೈಮಗ್ಗ ಬಹಳ ಪ್ರಮುಖ ಪಾತ್ರ ವಹಿಸಿದೆ. ಕೈಮಗ್ಗ, ಚರಕ, ಇವೆಲ್ಲವೂ ಸ್ವಾತಂತ್ರ‍್ಯ ಹೋರಾಟಕ್ಕೆ ದೊಡ್ಡ ಪ್ರೋತ್ಸಾಹ ನೀಡಿದೆ. ಇದು ಸ್ವಾತಂತ್ರ‍್ಯ ಹೋರಾಟದ ಪ್ರೇರಣೆ. ಅತಿ ಹೆಚ್ಚು ಉದ್ಯೋಗ ನೀಡುವ ಕ್ಷೇತ್ರ ಇದಾಗಿದೆ. ನಾವು ಹಲವಾರು ಯೋಜನೆಗಳನ್ನು ನೇಕಾರರ ಮಕ್ಕಳಿಗೆ ವಿದ್ಯಾ ನಿಧಿಯನ್ನು ಜುಲೈ ೨೮ ರಂದು ಪ್ರಾರಂಭಿಸಲಾಗಿದೆ. ಸುಮಾರು ೫೦ ಸಾವಿರಕ್ಕಿಂತ ಹೆಚ್ವು ನೇಕಾರರ ಮಕ್ಕಳಿಗೆ ಇದರಿಂದ ಪ್ರಯೋಜನವಾಗಲಿದೆ. ಹೆಣ್ಣು ಮಕ್ಕಳಿಗೆ ೮ ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೂ ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles