ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ರಾಜ್ಯ ಚುನಾವಣೆಗೆ ಮೊದಲೇ ಅಸ್ಸಾಂ ಕಾಂಗ್ರೆಸ್‌ನಲ್ಲಿ ಆಪರೇಷನ್ ಕಮಲದ ಭೀತಿ ಎದುರಾಗಿದ್ದು 14 ಮಂದಿ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ.ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿಕೆ ಶಿವಕುಮಾರ್ ಆಪ್ತರು ಸ್ವಾಗತಿಸಿದರು.ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಮತ್ತು ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ವಿಶೇಷ ವಸತಿ ವ್ಯವಸ್ಥೆ ಮಾಡಲಾಗಿದೆ.





