ಬಳ್ಳಾರಿ: ಈಶಾನ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾರಾ ಪ್ರತಾಪ ರೆಡ್ಡಿ ಅವರಿಗೆ ಅಮ್ ಆದ್ಮಿ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡುತ್ತದೆ ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯ ಮಂತ್ರಿ ಚಂದ್ರು ಅವರು ಹೇಳಿದರು.
ನಗರದ ನಕ್ಷತ್ರ ಹೋಟೆಲಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದಾರೆ.ಈ ಬಾರಿ ಮತ್ತೊಮ್ಮೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅವರಿಗೆ ಅಮ್ ಆದ್ಮಿ ಪಕ್ಷದಿಂದ ಏಳು ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಬೆಂಬಲ ನೀಡಲಾಗುವುದು ಎಂದರು.ನಾರಾ ಪ್ರತಾಪ ರೆಡ್ಡಿ ಅವರು ಬುಡಾ ಅಧ್ಯಕ್ಷರಾದಂತಹ ಸಂದರ್ಭದಲ್ಲಿ ಬಳ್ಳಾರಿ ನಗರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಾಗೂ ಹಲವಾರು ಸೇವಾ ಕಾರ್ಯಗಳನ್ನು ಸಹ ಮಾಡಿದ್ದಾರೆ ಎಂದರು.
ಈಶಾನ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾದ ನಾರಾ ಪ್ರತಾಪ ರೆಡ್ಡಿ ಅವರು ಮಾತನಾಡಿ ಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿ ಸೋತಾಗ ನಮ್ಮ ತಂಡದ ಸದಸ್ಯರ ಜೊತೆಗೆ ಮಾತನಾಡಿ ಮತ್ತೊಮ್ಮೆ ಸ್ಪರ್ಧಿಸುವ ನಿರ್ಧಾರ ಕೈಗೊಳ್ಳಲಾಗಿತ್ತು ಅದರಂತೆ ನಮ್ಮ ತಂಡದಿಂದ ಈ ಬಾರಿ ನಮ್ಮ ತಂಡದಿಂದ 35ರಿಂದ 40ಸಾವಿರ ಮತದಾರರ ನೋಂದಣಿ ಸಹ ಮಾಡಲಾಗಿದೆ ಎಂದರು.ಕಳೆದ ಬಾರಿ ಚುನಾವಣೆಗೆ ನಿಂತಾಗ ನನ್ನ ನೋಡಿ ನಕ್ಕವರಿಗೆ ಗೇಲಿ ಮಾಡಿದವರಿಗೆ ಹೆಚ್ಚಿನ ಮತಗಳನ್ನು ಪಡೆದು ನಗುತ್ತಲೇ ಉತ್ತರಿಸಿದೆ ಎಂದರು.ಈ ಬಾರಿ ಮತ್ತೊಮ್ಮೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಏಳು ಜಿಲ್ಲೆಗಳಲ್ಲಿ ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದ ನಂತರ ಚಂದ್ರ ಶೇಖರ್ ಪಾಟೀಲ್ ಅವರ ದರ್ಶನ ಏಳು ಜಿಲ್ಲೆಗಳಲ್ಲಿ ಯಾರಿಗೂ ಸಿಕ್ಕಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮಂಜುನಾಥ, ದೊಡ್ಡ ಕೇಶವರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.