ಉಚಿತ ಹೊಲಿಗೆ ಯಂತ್ರ, ದಿನಸಿ ಕಿಟ್‌ಗಳ ವಿತರಣೆ

0
88

ಚಿತ್ರದುರ್ಗ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆಯ ಶತಮಾನೋತ್ಸವ ಆಚರಣೆ ಅಂಗವಾಗಿ ಕೋವಿಡ್‌ನಿಂದ ನೊಂದ ಕುಟುಂಬಗಳಿಗೆ ಉಚಿತ ಹೊಲಿಗೆ ಯಂತ್ರಗಳು ಹಾಗೂ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.
ಚಿತ್ರದುರ್ಗ ನಗರದ ಎಪಿಎಂಸಿ ಯಾರ್ಡ್ “ಎ” ಬ್ಲಾಕ್‌ನಲ್ಲಿರುವ ಎಸ್.ರಾಮರೆಡ್ಡಿ ಬಿ.ಎಂ.ಶಿವಮೂರ್ತಪ್ಪ ದಲ್ಲಾಲರ ಅಂಗಡಿ ಆವರಣದಲ್ಲಿ ಶುಕ್ರವಾರ ಉಚಿತ ಹೊಲಿಗೆ ಯಂತ್ರ ಹಾಗೂ ದಿನಸಿ ಕಿಟ್ ವಿತರಣೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ, ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಶಾಖೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕೋವಿಡ್-19 ಸಾಂಕ್ರಾಮಿಕ ರೋಗವು ಉಳ್ಳವರಿಗೂ ಹಾಗೂ ಉಳ್ಳದಿಲ್ಲದವರಿಗೂ ಜೀವನ ಪಾಠ ಕಲಿಸಿದೆ. ಕೋವಿಡ್-19ರಿಂದ ಎಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಬಹಳಷ್ಟು ಜನರು ಉತ್ತಮವಾಗಿ ಕೆಲಸನಿರ್ವಹಿಸಿ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿದ್ದಾರೆ. ಅದೇ ರೀತಿಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ರಕ್ತದಾನ ಶಿಬಿರ, ಆಹಾರ ಕಿಟ್‌ಗಳ ವಿತರಣೆ ಮಾಡಿದ್ದಾರೆ. ಜೊತೆಗೆ ಎಷ್ಟೋ ಜೀವಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯು ಕೋವಿಡ್-19ರ ಸಂದರ್ಭದಲ್ಲಿ ಸಲ್ಲಿಸಿದ ಸೇವಾ ಮನೋಭಾವವನ್ನು ಪರಿಗಣಿಸಿ ಈಚೆಗೆ ರಾಜ್ಯಪಾಲರು ಪ್ರಶಸ್ತಿಯನ್ನು ನೀಡಿದ್ದಾರೆ ಎಂದು ಹೇಳಿದರು.

Previous articleದುಗರ್ಮ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ತಲುಪಿಸಲಿರುವ ಆಕ್ಟಾಕಾಪ್ಟರ್ ಡ್ರೋನ್!
Next articleಮಳೆಯಿಂದಾಗಿ ಮನೆಹಾನಿ ತಹಶೀಲ್ದಾರರಿಂದ ಪರಿಶೀಲನೆ

LEAVE A REPLY

Please enter your comment!
Please enter your name here