ಬೆಳಗಾಯಿತು ವಾರ್ತೆ / https://belagayithu.in
ಮಂಗಳೂರು: ನಿನ್ನೆ ದೆಹಲಿಯಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆಯ ವಿಸ್ತರಣೆ ಇದು. ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಂಗ್ ಎನ್ ಎಸ್ ಯು ಐ ನ (NSUI) ದಕ್ಷಿಣ ಕನ್ನಡ ಘಟಕ ಇಂದು ಸ್ಥಳೀಯ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನೆಯೆದುರು ಪ್ರತಿಭಟನೆ ನಡೆಸಿ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿತು. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು. . ರಾಷ್ಟ್ರಮಟ್ಟದಲ್ಲಿ ಉತ್ತಮ ಸಂಸದನೆಂಬ ಹೆಸರು ಪಡೆದಿರುವ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿರುವ ಕೊಡುಗೆ ಏನು? ಜಿಲ್ಲೆಯಲ್ಲಿ ಅನೇಕ ಹೆಸರಾಂತ ಕಾಲೇಜುಗಳಿವೆ, ಆದರೆ ಸಂಸದರಿಂದ ಉದ್ಯೋಗ ಸೃಷ್ಟಿ ಮಾಡಲಾಗಿಲ್ಲ, ರಾಜ್ಯ ಸರ್ಕಾರದ ತೆರಿಗೆ ಹಣವನ್ನು ಕೇಂದ್ರದ ವಾಪಸ್ಸು ಕೊಡಿಸುವುದು ಇವರಿಗೆ ಸಾಧ್ಯವಾಗುತ್ತಿಲ್ಲ, ಇಂಥ ಸಂಸದರು ನಮಗೆ ಬೇಕಿಲ್ಲ, ಎಂದು ಹೇಳುತ್ತಾ ಯುವಕ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಅಂತ ತನ್ನ ಸಹಪಾಠಿಗಳೊಂದಿಗೆ ಘೋಷಣೆ ಕೂಗಿದರು.