25.4 C
New York
Sunday, July 3, 2022

Buy now

spot_img

ಕೆಪಿಟಿಸಿಎಲ್ 1899 ಖಾಲಿ ಹುದ್ದೆ ಭರ್ತಿ

ಬೆಂಗಳೂರು – ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ,ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.

ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡಿದರು.

ಕೆಪಿಟಿಸಿಎಲ್ ನ 1899 ಹುದ್ದೆಗಳಿಗೆ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಅಂದಿನಿಂದ ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು, ಈ ಬಗ್ಗೆ ಅನೇಕರು ನನ್ನ ಗಮನ ಸೆಳೆದರು. ಕೂಡಲೇ ಅಗತ್ಯವಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಆದೇಶ ಪತ್ರ ನೀಡುವಂತೆ ಸೂಚನೆ ನೀಡಿದ್ದೆ, ಅದರಂತೆ ಇಂದು 21 ಜನ ಕಿರಿಯ ಪವರ್ ಮ್ಯಾನ್ ಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ, ಶೀಘ್ರದಲ್ಲೇ ಉಳಿದ 1878 ಜನರಿಗೆ ನೇಮಕಾತಿ ಆದೇಶ ನೀಡಲಾಗುವುದು. ಬಿಜೆಪಿ ಸರ್ಕಾರ ಬಂದ ನಂತರ ಅತಿ ದೊಡ್ಡ ಪ್ರಮಾಣದಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿರುವುದು ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,377FollowersFollow
0SubscribersSubscribe
- Advertisement -spot_img

Latest Articles