ಬೆಳಗಾಯಿತು ವಾರ್ತೆ / https://belagayithu.in
ಆರ್ಥಿಕತೆ ಕುರಿತು ಕೇಂದ್ರ ಸರ್ಕಾರ ಹೊರಡಿಸಲಿರುವ ಶ್ವೇತಪತ್ರಕ್ಕೆ ಕಾಂಗ್ರೆಸ್ನ ಕಪ್ಪು ಪತ್ರ ದೃಷ್ಟಿಬೊಟ್ಟಿದ್ದಂತೆ ಎಂದು ಪ್ರಧಾನಿ ಹೇಳಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ 10 ವರ್ಷದ ಅವಧಿಯಲ್ಲಿ ದೇಶದ ಆರ್ಥಿಕತೆ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲು ಸಿದ್ಧವಾಗಿದೆ. ಹಾಗೆಯೇ ಮೋದಿ ಸರ್ಕಾರದಲ್ಲಿ ಆರ್ಥಿಕತೆ ಉತ್ತಮವಾಗಿಲ್ಲ ಎಂದು ಸಾಬೀತುಪಡಿಸಲು ಕಾಂಗ್ರೆಸ್ ಕಪ್ಪು ಪತ್ರ ಹೊರಡಿಸಲು ಸಿದ್ಧವಾಗಿದೆ. ಎಲ್ಲಿ ಬಿಜೆಪಿ ಸರ್ಕಾರ ಇಲ್ಲವೋ ಆ ರಾಜ್ಯಕ್ಕೆ ಅನುದಾನ ನೀಡುವುದಿಲ್ಲ. ನೆಹರು ಕಾಲದಲ್ಲಿ ನಿರ್ಮಾಣವಾದ ಸಂಸ್ಥೆಯಿಂದ ಜನರಿಗೆ ಉದ್ಯೋಗ ಸಿಗುತ್ತಿದೆ. ಮೋದಿ ಸರ್ಕಾರದಲ್ಲಿ ಸ್ಥಾಪನೆಯಾದ ಸಂಸ್ಥೆಗಳು ಅಥವಾ ಉದ್ಯೋಗ ಸೃಷ್ಟಿ ಮಾಡಿಲ್ಲ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.