ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕಭರತ್ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ





