ಗರ್ಭಿಣಿ ಮಹಿಳೆಯರು ಮಧ್ಯಾಹ್ನ ಅವಧಿಯಲ್ಲಿ ಹೊರಹೋಗದಿರಿ

ಬೆಳಗಾಯಿತು ವಾರ್ತೆ
ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನದ ಅವಧಿಯಲ್ಲಿ ಗರ್ಭಿಣಿ ಮಹಿಳೆಯರು ಹೊರಗಡೆ ಓಡಾಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಶುಕ್ರವಾರ ವಿದ್ಯಾನಗರ ಬಡಾವಣೆಯ ಕರಿಮಾರೆಮ್ಮ ದೇವಸ್ಥಾನದ ಬಳಿಯ ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಅವರು ಮಾತನಾಡಿದರು.
ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆಯು ಹೆಚ್ಚುತ್ತಿರುವುದರಿಂದ ಮಧ್ಯಾಹ್ನ 12 ರಿಂದ 03 ಗಂಟೆ ಅವಧಿಯಲ್ಲಿ ಬಿಸಿಲಿನ ತೀವ್ರತೆಯು ಹೆಚ್ಚು ಕಂಡುಬರುತ್ತಿರುವ ಹಿನ್ನಲೆಯಲ್ಲಿ ಗರ್ಭಿಣಿ ಮಹಿಳೆಯರು ಆದಷ್ಟು ಮನೆಯಲ್ಲಿಯೇ ಇರುವ ಮೂಲಕ ಆರೋಗ್ಯದ ಕಾಳಜಿಗೆ ಒತ್ತು ನೀಡಬೇಕು. ಕುಟುಂಬದ ಸದಸ್ಯರು ಸಹ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ದೇಹದಲ್ಲಿ ನೀರಿನಾಂಶದಿAದ ಆಗಬಹುದಾದ ಅನಾನುಕೂಲತೆಗಳನ್ನು ತಡೆಗಟ್ಟಲು ಹೆಚ್ಚು ನೀರನ್ನು ಕುಡಿಯಲು ಆದ್ಯತೆ ಮಾಡಿಕೊಳ್ಳಬೇಕು. ಬೇಸಿಗೆ ಹಿನ್ನಲೆಯಲ್ಲಿ ಬಾಣಂತಿಯರು ನವಜಾತ ಶಿಶುವಿಗೆ ತಾಯಿ ಹಾಲು ಕಡಿಮೆ ಆಗಬಹುದೆಂಬ ಭಾವನೆಯಿಂದ ತಾಯಿ ಹಾಲು ಬಿಟ್ಟು ಬೇರೆ ಏನನ್ನೂ ಕೊಡಬಾರದು. ತಾಯಿ ಹಾಲಿನಲ್ಲಿ ಸಾಕಷ್ಟು ನೀರಿನಾಂಶ ಇರುವುದರಿಂದ ದಿನಕ್ಕೆ ಕನಿಷ್ಟ 10 ರಿಂದ 12 ಬಾರಿ ಅಥವಾ ಮಗು ಅತ್ತಾಗಲೆಲ್ಲಾ ಹಾಲುಣಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಗ್ರಾಮ ಮಟ್ಟದಲ್ಲಿರುವ ಆಯುಷ್ಮಾನ್ ಆರೋಗ್ಯ ಮಂದಿರ ಸೇರಿದಂತೆ ಎಲ್ಲ ಆರೋಗ್ಯ ಕೇಂದ್ರಗಲ್ಲಿ ಬಿಸಿಲಿನ ಶಾಖಾಘಾತದ ಚಿಕಿತ್ಸೆಗೆ ಸಂಬAಧಿಸಿದAತೆ ಅಗತ್ಯ ತುರ್ತು ಔಷಧಿಗಳು ಕೊರತೆಯಾಗದಂತೆ ದಾಸ್ತಾನು ಇರಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಮುಜಾಮಿಲ್ ಫಿರ್ದೊಜ್, ಸಿಬ್ಬಂದಿ ಗಂಗಾ ಭವಾನಿ, ಪದ್ಮಾ, ಝೈಬಾ ನಾಜ್ ಹಾಗೂ ಸಾರ್ವಜನಿಕರು ಹಾಜರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles