38 C
Bellary
Saturday, April 26, 2025

Localpin

spot_img

ಗ್ರಾಮ ಒನ್ ಕೇಂದ್ರಗಳಲ್ಲಿ ಕೆಲಸ ಖಾಲಿ ಇದೆ

ಬೆಳಗಾಯಿತು ವಾರ್ತೆ / https://belagayithu.in

ಕೊಪ್ಪಳ, ಫೆಬ್ರವರಿ 09: ಕೊಪ್ಪಳ ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳ ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತ ವಿದ್ಯಾವಂತ ನಿರುದ್ಯೋಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಫೆಬ್ರವರಿ 15ರೊಳಗೆ ಅರ್ಜಿ ಸಲ್ಲಿಸಬಹುದು. ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳ ಮರು ಅಧಿಸೂಚನೆಯನ್ನು ಸರ್ಕಾರವು ಹೊರಡಿಸಿದೆ.

ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ, ಕಾರಟಗಿ ತಾಲ್ಲೂಕಿನ ಬೆನ್ನೂರ, ಬೇವಿನಹಳ್ಳಿ ಹಾಗೂ ಸಿದ್ದಾಪುರ, ಕೊಪ್ಪಳ ತಾಲ್ಲೂಕಿನ ಗಿಣಿಗೇರಾ, ಕುಕನೂರು ತಾಲ್ಲೂಕಿನ ಇಟಗಿ, ಕುಷ್ಟಗಿ ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮ ಪಂಚಾಯತ್‌ಗಳಲ್ಲಿ ತಲಾ 1 ಮತ್ತು ಕನಕಗಿರಿಯ ತಾಲ್ಲೂಕಿನ ಹಿರೇಖೆಡ ಗ್ರಾಮ ಪಂಚಾಯಿತಿಯಲ್ಲಿ 2 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 9 ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಆಯಾ ಗ್ರಾಮ ಪಂಚಾಯಿತಿಯ ನಿವಾಸಿಯಾಗಿರಬೇಕು. ವಿದ್ಯಾವಂತ ನಿರುದ್ಯೋಗಿಗಳು ಫೆಬ್ರವರಿ 15ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles