ಬೆಳಗಾಯಿತು ವಾರ್ತೆ / https://belagayithu.in
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಐದು ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಗೊಳಿಸಿದೆ. ಇದಕ್ಕೂ ಮುನ್ನ ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿತ್ತು. ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ.ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್ನೊಂದಿಗೆ ಇಂಗ್ಲೆಂಡ್ ಬೌಲರ್ಗಳ ಬೆಂಡೆತ್ತಿದ ಯಶಸ್ವಿ ಜೈಸ್ವಾಲ್ 290 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 19 ಫೋರ್ಗಳೊಂದಿಗೆ 209 ರನ್ ಬಾರಿಸಿದ್ದರು. ಈ ಭರ್ಜರಿ ದ್ವಿಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 396 ರನ್ ಕಲೆಹಾಕಿತು.
ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 292 ರನ್ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು 106 ರನ್ಗಳಿಂದ ಗೆದ್ದುಕೊಂಡಿದೆ.