ಡಾ. ಜಿ. ಪರಮೇಶ್ವರಗೆ ಸಿಎಂ ಸ್ಥಾನ ನೀಡಲು ಆಗ್ರಹ

ಬೆಳಗಾಯಿತು ವಾರ್ತೆ
ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರಾದ ಡಾ. ಜಿ. ಪರಮೇಶ್ವರ ಅವರಿಗೆ ಮುಖ್ಯ ಮಂತ್ರಿ ಸ್ಥಾನ ನೀಡುವಂತೆ ಛಲವಾದ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಕುಮಾರ್ ಅವರು ಒತ್ತಾಯ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಡಾ. ಜಿ. ಪರಮೇಶ್ವರ ಅವರು ರಾಜಕೀಯದಲ್ಲಿ ಪರಿಣತಿ ಮತ್ತು ಅನುಭವ ಹೊಂದಿದ್ದಾರೆ. ಸತತ ಏಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಬಲ ಪಡಿಸಿದ್ದಾರೆ. ಅವರ ಅನುಭವ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಸಿಎಂ ಸ್ಥಾನವನ್ನು ನೀಡಬೇಕು ಎಂದರು.
ರಾಜ್ಯ ರಾಜಕೀಯದಲ್ಲಿ ಸುಮಾರು 75 ವರ್ಷ ಕಳೆದರೂ ಛಲವಾದಿ ಸಮುದಾಯಕ್ಕೆ ಸಿಎಂ ಸ್ಥಾನ ಸಿಕ್ಕಿಲ್ಲ ಹಾಗಾಗಿ ಹೈ ಕಮಾಂಡ್ ಇದನ್ನು ಪರಿಗಣಿಸಿ ನಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು. ಒಂದು ವೇಳೆ ಡಾ. ಜಿ. ಪರಮೇಶ್ವರ ಅವರಿಗೆ ಸಿಎಂ ಸ್ಥಾನ ನೀಡದಿದ್ದರೆ, ಬರುವ ಚುನಾವಣೆಯಲ್ಲಿ ಪ್ರತಿ ಮನೆಗಳಿಗೆ ಹೋಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಜಾಗೃತಿ ಮೂಡಿಸಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಛಲವಾದಿ ಸಮುದಾಯದ ಮುಖಂಡರು ಹಾಜರಿದ್ದರು

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles