ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಹೊರವಲಯದಲ್ಲಿ ಸೋಮವಾರ ಬೆಳಗಿನ ಜಾವ ಟ್ರಕ್‌ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್‌ನಲ್ಲಿ ಇದ್ದ 40 ಯಮಾಹ ಕಂಪನಿಯ ಎಫ್ ಝಡ್ ಬೈಕ್‌ಗಳು ಸುಟ್ಟು ಕರಕಲಾದ ಘಟನೆ ಜರುಗಿದೆ.
ಟ್ರಕ್‌ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.
ಚೆನೈನಿAದ ಬಂದ ಟ್ರಕ್ ಬಳ್ಳಾರಿಯ ಯಮಾಹ ಶೋ ರೂಮ್‌ಗೆ 20 ಬೈಕ್ ಮತ್ತು ಬಿಜಾಪುರಕ್ಕೆ 20 ಬೈಕ್‌ಗಳನ್ನು ಕಳುಹಿಸಬೇಕಾಗಿತ್ತು. ಆದರೆ ಬೆಂಕಿ ಅವಘಡದಿಂದ ಸುಟ್ಟು ಕರಕಲಾಗಿದೆ. ಈ ಘಟನೆಯಿಂದ 60 ಲಕ್ಷ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಗಾಂಧೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





