ಬೆಳಗಾಯಿತು ವಾರ್ತೆ :
ಹಗರಿಬೊಮ್ಮನಹಳ್ಳಿ.ಜು.06 :ಮುಂಬರುವ 2023ರ ಚುನಾವಣೆಯಲ್ಲಿ ಜನರೇ ತಕ್ಕ ಪಾಟ ಕಲಿಸಲಿದ್ದು ಕಾಂಗ್ರೇಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಹೇಳಿದರು.
ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಸೋಮವಾರ ಕಾಂಗ್ರೆಸ್ನ ವಿವಿಧ ವರ್ಗಗಳ ಅಧ್ಯಕ್ಷರುಗಳಿಗೆ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ರಾಜ್ಯ ಹಾಗೂ ಕೇಂದ್ರದಲ್ಲಿರುವ ಬಜೆಪಿ ಪಕ್ಷವು ಜನ ಸಾಮಾನ್ಯರ ಮೇಲೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುತ್ತಿದ್ದು ಸಾಮನ್ಯರ ಜೀವನದ ಬಗ್ಗೆ ಕಾಳಜಿ ಇಲ್ಲದಂತೆ ಬ್ರಷ್ಟಾಚಾರದಲ್ಲಿ ನಿರತವಾಗಿವೆ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿವೆ ಕೇವಲ ಬಾಯಿ ಮಾತಿನಲ್ಲಿ ದೇಶವನ್ನು ಅಭಿವೃಧ್ಧಿ ಮಾಡುತ್ತಾ ಬ್ರಷ್ಟಾಚಾರದಲ್ಲಿ ತೊಡಗಿವೆ ಎಂದು ಕಿಡಿಕಾರಿದರು.
ನಂತರ ಶಾಸಕ ಎಸ್.ಭೀಮನಾಯ್ಕ ಮಾತನಾಡಿ,ಕಾಂಗ್ರೆಸ್ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದು, 2023ರ ಅವಧಿಗೆ ಅಧಿಕಾರ ಹಿಡಿಯುವುದು ನಿಶ್ಚಿತ. ಈಗಾಗಲೇ ಕಾಂಗ್ರೆಸ್ ಪಕ್ಷ ವಿವಿಧ ಸೆಲ್ಗಳ ಅಧ್ಯಕ್ಷರುಗಳನ್ನು ಆಯ್ಕೆ ಮಾಡಿದ್ದು, ಪ್ರತಿಯೊಬ್ಬರು ಪಕ್ಷ ಸಂಘಟನೆ ನಿಟ್ಟಿನಲ್ಲಿ ಜವಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು, ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ದೋರಣೆ ವಿರುದ್ದ ಜುಲೈ 7ರಂದು ಜಿಲ್ಲೆಯಲ್ಲಿ ಸೈಕಲ್ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವ ಯು.ಟಿ.ಖಾದರ್, ಕೃಷ್ಣಬೈರೇಗೌಡ ಆಗಮಿಸಲಿದ್ದಾರೆ. ದಿ.8ರಂದು ತಾಲೂಕಿನಲ್ಲಿ ಸೈಕಲ್ ಜಾಥ ಹಮ್ಮಿಕೊಂಡಿದ್ದು ಬೃಹತ್ ಮಟ್ಟದಲ್ಲಿ ಸರಕಾರದ ವಿರುದ್ದ ಪ್ರತಿಭಟನೆ ಮಾಡಲಿದ್ದೇವೆ. ವೀಕ್ಷಕರಾಗಿ ಸಂತೋಷಲಾಡ್, ವಿಜಯ್ಸಿಂಗ್, ಮಂಜುನಾಥ ನೇತೃತ್ವ ವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯರಾದ ಅಕ್ಕಿ ತೋಟೇಶ, ಹೆಗ್ಡಾಳ್ ರಾಮಣ್ಣ, ಪುರಸಭೆ ಉಪಾಧ್ಯಕ್ಷ ಹುಳ್ಳಿ ಮಂಜುನಾಥ, ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ, ಕನ್ನಿಹಳ್ಳಿ ಚಂದ್ರಶೇಖರ, ದೇವೆಂದ್ರಪ್ಪ, ಅಲ್ಲಾಭಕ್ಷಿ, ಕಾಯಿಗಡ್ಡಿ ಕೊಟ್ರೇಶ, ಬಾಲಕೃಷ್ಣಬಾಬು ಇತರರಿದ್ದರು. ಕಾರ್ಯಕ್ರಮವನ್ನು ಮುಖಂಡ ಡಿಶ್ ಮಂಜುನಾಥ ನಿರೂಪಿಸಿದರು.