ತಾ.ಪಂ.ಮಾಜಿ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಕಾಂಗ್ರೆಸ್ ಸೇರ್ಪಡೆ

0
414

ಬೆಳಗಾಯಿತು ವಾರ್ತೆ
ಕೊಟ್ಟೂರು: ಕೂಡ್ಲಿಗಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಕೊಟ್ಟೂರು ತಾಲೂಕು ಪಂಚಾಯಿತಿ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವೆಂಕಟೇಶ್ ನಾಯಕ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ಭೀಮನಾಯ್ಕ್ ಹಾಗೂ ಉಜ್ಜಿನಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ.ಎಂ.ಜೆ ಹರ್ಷವರ್ಧನ್ ಅವರ ನೇತೃತ್ವದಲ್ಲಿ ನ.27 ರಂದು ಬೆಂಗಳೂರನ ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ನಾನು ಯಾರ ಒತ್ತಡದಿಂದ ಬಿಜೆಪಿ ಪಕ್ಷ ಬಿಟ್ಟಿಲ್ಲ, ನಾಯಕರ ಕೆಟ್ಟ ರಾಜಕೀಯ ಮತ್ತು ಪಕ್ಷಕ್ಕಾಗಿ ನಿಷ್ಠಾವಂತ ಕಾರ್ಯಕರ್ತರನ್ನು ಹಾಗೂ ಇತರ ವ್ಯಕ್ತಿಗಳನ್ನು ಬೆಳೆಯಲು ಬೀಡುತ್ತಿಲ್ಲ. ಆದ್ದರಿಂದ ಸ್ವಯಂಕೃತವಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆಂದು ಹೇಳಿದ್ದಾರೆ.

Previous article“ವಿಧಾನ ಪರಿಷತ್ತು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ.”
Next article“ಬಿಜೆಪಿ ಅವಧಿಯಲ್ಲಿಮನೆಗಳ ಹಂಚಿಕೆ ಇಲ್ಲ:ಮತ ಕೇಳುವ ನೈತಿಕತೆ ಇಲ್ಲ.”

LEAVE A REPLY

Please enter your comment!
Please enter your name here