ನರೇಗಾ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಬಳಸಿ ಮಾದರಿ ಶಾಲೆ ನಿರ್ಮಿಸಿ : ರಶ್ಮಿ ವಿ.ಮಹೇಶ್

0
84

ಕೊಪ್ಪಳ: ನರೇಗಾ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕೊಪ್ಪಳ ಜಿಲ್ಲೆಯಲ್ಲಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಹೇಳಿದರು.ಕೊಪ್ಪಳ ಜಿಲ್ಲಾ ಪಂಚಾಯತ್ ಪ್ರಗತಿ ಹಾಗೂ ಅನಿರ್ಭಂದಿತ ಮತ್ತು 15ನೇ ಹಣಕಾಸು ಯೋಜನೆಯ ಕ್ರೀಯಾ ಯೋಜನೆ ತಯಾರಿಸುವ ಕುರಿತು ಕೃಷಿ ಇಲಾಖೆ ಸಭಾಂಗಣದಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
15ನೇ ಹಣಕಾಸು ಯೋಜನೆಯ ಅನುದಾನವನ್ನು ಬಳಸಿಕೊಂಡು ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯ, ರೀಡಿಂಗ್ ಹಾಲ್, ಶಾಲಾ ಕಟ್ಟಡ ದುರಸ್ತಿ ಮಾಡಿಸಲು ಹಾಗೂ ನೂತನ ಕಟ್ಟಡಗಳನ್ನು ನಿರ್ಮಿಸಿಕೊಳ್ಳಬಹುದು. ಹಾಗೂ ನರೇಗಾ ಯೋಜನೆಯನ್ನು ಬಳಕೆ ಮಾಡಿಕೊಂಡು ಸರ್ಕಾರಿ ಶಾಲೆಗಳಲ್ಲಿ ಕೈತೋಟ, ಆಟದ ಮೈದಾನ, ಅಡುಗೆ ಕೋಣೆ ಹಾಗೂ ಶಾಲಾ ಕಂಪೌAಡ ನಿರ್ಮಿಸಿಕೊಂಡು ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ವಾತಾವರಣವನ್ನು ಕಲ್ಪಿಸಬೇಕು ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

Previous articleಭಾರತಕ್ಕೆ ಮತ್ತೊಂದು ಪದಕದ ಭರವಸೆ: ಸೆಮಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು
Next articleಡಣಾಯಕನಕೆರೆಗೆ ಹರಿದ ತುಂಗಭದ್ರೆ

LEAVE A REPLY

Please enter your comment!
Please enter your name here