25.2 C
Bellary
Friday, June 21, 2024

Localpin

spot_img

ನೆಹರು ಹಿಂದುಳಿದವರ ಎಲ್ಲಾ ರೀತಿಯ ಮೀಸಲಾತಿಗೆ ವಿರುದ್ಧವಾಗಿದ್ದರು

ಬೆಳಗಾಯಿತು ವಾರ್ತೆ / https://belagayithu.in

ಕಾಂಗ್ರೆಸ್ ಯಾವಾಗಲೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ವಿರುದ್ಧ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ. ಉದ್ಯೋಗದಲ್ಲಿ ಯಾವುದೇ ರೀತಿಯ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಜವಾಹರಲಾಲ್ ನೆಹರು ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಯ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಒಬಿಸಿಗಳಿಗೆ ಎಂದಿಗೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಬೋಧಿಸಬಾರದು ಎಂದು ಹೇಳಿದರು.

‘ಒಬಿಸಿಗೆ ಯಾವತ್ತೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡಲಿಲ್ಲ, ಬಾಬಾ ಸಾಹೇಬರನ್ನು ಭಾರತ ರತ್ನಕ್ಕೆ ಅರ್ಹರೆಂದು ಪರಿಗಣಿಸದ ಕಾಂಗ್ರೆಸ್ ತನ್ನ ಕುಟುಂಬಕ್ಕೆ ಮಾತ್ರ ಭಾರತ ರತ್ನ ನೀಡುತ್ತಿರುವ ಕಾಂಗ್ರೆಸ್​ ಇಂದು ನಮಗೆ ಸಲಹೆ ನೀಡುತ್ತಿದೆ ಎಂದರು. ಈಗ ದೇಶವನ್ನು ಉತ್ತರ-ದಕ್ಷಿಣ ಎಂದು ಒಡೆಯುವ ಹೇಳಿಕೆಯನ್ನು ನೀಡುತ್ತಿದೆ ಎಂದು ಮೋದಿ ಹೇಳಿದ್ದಾರೆ

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles