19.1 C
New York
Tuesday, August 16, 2022

Buy now

spot_img

ಪಂತ್ ಶತಕದಬ್ಬರಕ್ಕೆ ಇಂಗ್ಲೆಂಡ್ ಧೂಳಿಪಟ!

ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಭಾರತ ಮೂರು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. ಮ್ಯಾಂಚೆಸ್ಟರ್‌ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಭಾರತ 2-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ. ಕಳೆದ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾದ ಇಬ್ಬರು ಸ್ಟಾರ್‌ಗಳು ಮಾತ್ರ ಈ ಗೆಲುವಿನ ಹೀರೋಗಳಾದರು. ರಿಷಬ್ ಪಂತ್ ಅವರ ಮೊದಲ ಏಕದಿನ ಶತಕ ಮತ್ತು ಹಾರ್ದಿಕ್ ಪಾಂಡ್ಯವರ ಬ್ಲಾಕ್ ಬಸ್ಟರ್ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತವು ಇಂಗ್ಲೆಂಡ್ ನೀಡಿದ್ದ 260 ರನ್​ಗಳ ಗುರಿಯನ್ನು 43 ಓವರ್​ಗಳಲ್ಲಿ ಬೆನ್ನಟ್ಟಿತು. ಈ ಮೂಲಕ ಭಾರತ 2014ರ ನಂತರ ಇಂಗ್ಲೆಂಡ್‌ನಲ್ಲಿ ಮೊದಲ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles