22.3 C
New York
Tuesday, August 16, 2022

Buy now

spot_img

“ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯತೆಯ ಸ್ಪದಂನೆ ಕೊಡಲು ನಾವು ಸಿದ್ಧ”: ಸಿಎಂ ಬೊಮ್ಮಾಯಿ

ಬೆಂಗಳೂರು: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಿಜೆಪಿ ರಾಷ್ಟಿçÃಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿ ಶಿಫಾರಸ್ಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಪೌರಕಾರ್ಮಿಕರ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಸೌಹಾರ್ದತೆಯಿಂದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,436FollowersFollow
0SubscribersSubscribe
- Advertisement -spot_img

Latest Articles