34.5 C
Bellary
Monday, April 22, 2024

Localpin

spot_img

ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ

ಬಳ್ಳಾರಿ: ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ ಅವರು ಹೇಳಿದರು.

ನಗರದ ಸರಳಾದೇವಿ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಯುವ ರೆಡ್ ಕ್ರಾಸ್ ಘಟಕ,ಸುರುಳಿ ದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಹದಲ್ಲಿ ತೊಂದರೆ ಆದರೆ ವೈದ್ಯರು ಹತ್ತಿರ ಕರೆದು ಕೊಂಡು ಚಿಕಿತ್ಸೆ ಪಡೆಯುತ್ತಾರೆ ಆದರೆ ಮಾನಸಿಕ ಸಮಸ್ಯೆ ಗೊತ್ತಾಗಲ್ಲ ಕ್ರಮೇಣವಾಗಿ ಖಿನ್ನತೆಗೆ ಒಳಗಾಗುತ್ತಾರೆ ಎಂದರು.

ಈ ಸಂದರ್ಭದಲ್ಲಿ ಸರಳದೇವಿ ಸತೀಶ್ಚಂದ್ರ ಅಗರವಲ್ ಸರ್ಕಾರಿ ಪ್ರಥಮ ದರ್ಜೆ(ಸ್ವಾಯತ್ತ) ಕಾಲೇಜ್ ಪ್ರಾಂಶುಪಾಲರು ಡಾ. ಮಂಜುನಾಥ ರೆಡ್ಡಿ ಎಚ್.ಕೆ, ಯುವ ರೆಡ್ ಕ್ರಾಸ್ ಘಟಕ ಸಂಯೋಜಕರು ಡಾ.ಪಲ್ಲವಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಸೇರಿದಂದೇ ಕಾಲೇಜ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles