ರಾಜ್ಯದಲ್ಲಿ ಮತಾಂತರ ಘಟನೆಗಳು ನಡೆಯದಂತೆ ಜಿಲ್ಲೆಯಲ್ಲಿ ತೀವ್ರ ನಿಗಾ ಇಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿ ಸೇರಿದಂತೆ ರಾಜ್ಯದ ಕೆಲವೆಡೆ ಮತಾಂತರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅಲ್ಲಲ್ಲಿ ಮತಾಂತರ ಘಟನೆ ನಡೆಯುತ್ತಿದೆ. ಇಂತಹದ್ದಕ್ಕೆಲ್ಲಅವಕಾಶ ಕೊಡದಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ಬಲವಂತದ ಮತಾಂತರ ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುತ್ತಿರುವುದಾಗಿ ಸ್ಪಷ್ಟಪಡಿಸಿದರು.