ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿಯ ಖಾಸಗಿ ಶಾಲೆಯ ವಿದ್ಯಾರ್ಥಿ ಒಬ್ಬ ಶನಿವಾರ ರಾತ್ರಿ ವೇಳೆ ಚಾಕು ಹಿಡಿದು ಹಲ್ಲೆ ಮಾಡಿದ್ದು, ಒಂಬತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಒಬ್ಬ ವಿದ್ಯಾರ್ಥಿ ಸಾವನಪ್ಪದ ಘಟನೆ ನಡೆದಿದೆ.
ರಾತ್ರಿ ಊಟದ ಬಳಿಕ ಎಲ್ಲರೂ ಮಲಗಿಕೊಂಡಾಗ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ,
ಮಂಚದ ರಾಡ್ ತೆಗೆದು ಕೊಂಡು ಎಂಟು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ.
ಈ ಘಟನೆಯಲ್ಲಿ ಓರ್ವ ಸಾವು, ಇಬ್ಬರು ಗಂಭೀರ, ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮಕೇರ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನ ದಾಖಲು ಮಾಡಲಾಗಿದೆ.
ವಾರ್ಡನ್ ಮೇಲೂ ಹಲ್ಲೆ ಮಾಡಿದ ಬಾಲಕ ಹಲ್ಲೆ ಮಾಡಿ ಓಡಿ ಹೋಗಿದ್ದಾನೆ.
ವೀಮ್ಸ್ ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪ್ರಕರಣ ಬ್ರೂಸ್ ಪೇಟ್ ಠಾಣೆಯಲ್ಲಿ ದಾಖಲಾಗಿದೆ.





