ಬೆಳಗಾಯಿತು ವಾರ್ತೆ / https://belagayithu.in
ಬಿಜೆಪಿ ನಾಯಕ, ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇದೀಗ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿ ಚುನಾವಣೆ ಆರಂಭಕ್ಕೂ ಮುನ್ನ ರಾಮನ ಹೆಸರಿನಲ್ಲಿ ಪ್ರಚಾರ ಆರಂಭಿಸಿರುವ ಕಾಗೇರಿ, ಬಿಜೆಪಿಗೆ ನೀವು ಮತ ಹಾಕಿದರೆ ಅದು ರಾಮನಿಗೆ ಹಾಗೂ ಪ್ರಧಾನಿ ಮೋದಿಗೆ ಮತ ಹಾಕಿದಂತೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯರ್ತರಿಗೆ ಕರೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಚೇರಿಯಲ್ಲಿ ಮಾತನಾಡಿದ ಅವರು.ನಮ್ಮ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿಗೆ ಮತ ಹಾಕಿದ್ರೆ ಅದು ರಾಮನಿಗೆ ಮತ ನೀಡಿದಂತೆ. ಬಿಜೆಪಿಗೆ ಮತ ಚಲಾಯಿಸಿದರೆ ಅದು ನರೇಂದ್ರ ಮೋದಿಗೆ ಮತ ಹಾಕಿದಂತೆ. ಜತೆಗೆ, ದೇಶದ ಐಕ್ಯತೆಗೆ ಮತ ನೀಡಿದಂತೆ.