7.3 C
New York
Monday, December 5, 2022

Buy now

spot_img

ಬಿಜೆಪಿ ಕಾರ್ಯಕರ್ತನ ಹತ್ಯೆ: ಕೇರಳದಲ್ಲಿ ಕಾರ್ಯಾಚರಣೆಗೆ ಸಿಎಂ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಬಿಜೆಪಿ ಮುಖಂಡನ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಕೇರಳದಲ್ಲೂ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡನ ಹತ್ಯೆ ವಿಚಾರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಕುರಿತು ಆರ್ ಟಿ ನಗರದ ತಮ್ಮ ನಿವಾಸದ ಬಳಿ ಪ್ರತಿಕ್ರಿಯಿಸಿದ ಸಿಎಂ,  ಅಮಾಯಕ ಕೊಲೆಯಾದಗ ಆಕ್ರೋಶವಿರುತ್ತೆ. ಎಲ್ಲರಿಗೂ ಶಾಂತಿ ಸಹನೆಯಿಂದ ಇರಲು ಸೂಚಿಸಿದ್ದೇನೆ. ಹೋಮ್ ಮಿನಿಸ್ಟರ್ ಎಸ್ ಪಿಗೆ ಎಲ್ಲಾ ಸೂಚನೆ ನೀಡಿದ್ದಾರೆ. ಅದಷ್ಟು ಬೇಗ ಕೊಲೆಗಡಕರನ್ನ ಬಂಧಿಸಲು ಸೂಚನೆ ನೀಡಲಾಗಿದೆ ಎಂದರು.

ಕೇರಳ ಬಾರ್ಡರ್ ಆಗಿರೋದ್ರಿಂದ ಕೇರಳಕ್ಕೆ ಹೋಗಿಯಾದ್ರೂ ಕಾರ್ಯಚರಣೆ ಮಾಡಲು ಸೂಚಿಸಿದೆ ಎಂದು ಹೇಳಿದ ಮುಖ್ಯಮಂತ್ರಿಗಳು, ಕೆಲವೊಂದನ್ನ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ‌. ಹಿಂದಿನಿಂದ ಬಂದು ಮೋಸ ಮಾಡಿ ಕೊಲೆ ಮಾಡಿದ್ದಾರೆ. ಅವರನ್ನ ದಸ್ತಗಿರಿ ಮಾಡಿ ಉಗ್ರವಾದ ಶಿಕ್ಷೆಯನ್ನ ಕೊಡ್ತೀವಿ‌. ಇದೊಂದು ವ್ಯವಸ್ಥಿತ ಸಂಚು. ಇದನ್ನ ಸರಿಪಡಿಸುವ ಕೆಲಸ ನಮ್ದು.. ನಾವು ಮಾಡ್ತೀವಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles