ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಹಾಲಪ್ಪ ಆಚಾರ್ ಭೇಟಿ : ಪರಿಶೀಲನೆ

0
109

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಭತ್ತ ಮತ್ತು ಇತರ ವಿವಿಧ ಬೆಳೆಗಳು ನಷ್ಟವಾಗಿದ್ದು, ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರು ಬೆಳೆ ಹಾನಿ ಪ್ರದೇಶಗಳಿಗೆ ಇಂದು (ನ.22) ಭೇಟಿ ನೀಡಿ, ಪರಿಶೀಲಿಸಿದರು.
ತ್ವರಿತವಾಗಿ ರೈತರಿಗೆ ಬೆಳೆ ನಷ್ಟ ಪರಿಹಾರಕ್ಕೆ ಕ್ರಮ
ಕೊಪ್ಪಳ ತಾಲ್ಲೂಕಿನ ಅಗಳಕೇರಾ ಗ್ರಾಮದಲ್ಲಿ ಭತ್ತ ಬೆಳೆ ನಾಶ ಪ್ರದೇಶ ವೀಕ್ಷಿಸಿದ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ, ಹಾನಿಯಾಗಿರುವ ಬೆಳೆಗಳ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿ, ರೈತರಿಗೆ ಸಾಂತ್ವನ ಹೇಳುತ್ತಿದ್ದೇವೆ. ಅಕಾಲಿಕ ಮಳೆಯಿಂದ ಹಾನಿಯಾದ ಕೊಪ್ಪಳ ಜಿಲ್ಲೆಯ ಭತ್ತ, ದ್ರಾಕ್ಷಿ, ಶೆಂಗಾ, ತೊಗರಿ, ಮೆಕ್ಕೆಜೋಳ, ಈರುಳ್ಳಿ ಹಾಗೂ ಪ್ರಮುಖ ಬೆಳೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ಈ ಬೆಳೆಗಳ ಬಗ್ಗೆ ಸಮೀಕ್ಷೆ ನಡೆಸಿ, ತಕ್ಷಣ ಸರ್ಕಾರಕ್ಕೆ ವರದಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದರು.
ಮಳೆಯಿಂದಾಗಿ ನ. 21 ರವರೆಗೆ ಸಾಕಷ್ಟು ಬೆಳೆ ನಾಶ ಹಾಗೂ ಹಲವು ಕಡೆ ಮನೆಗಳಿಗೂ ಸಹ ನಷ್ಟವಾಗಿದೆ. ಮಳೆಯಿಂದ ನಷ್ಟವುಂಟಾದ ಮನೆಗಳನ್ನು ಎ, ಬಿ ಹಾಗೂ ಸಿ ಕೆಟಗೇರಿಯಲ್ಲಿ ಸರ್ವೇ ನಡೆಸುವಂತೆ ತಿಳಿಸಿದ್ದು, ಇದರಿಂದ ಮನೆಗಳು ನಷ್ಟವಾದ ಪ್ರಮಾಣದನ್ವಯ ಪರಿಹಾರ ನೀಡಲು ಅನುಕೂಲವಾಗುತ್ತದೆ. ಪ್ರಾಥಮಿಕ ಸರ್ವೇಯನ್ವಯ ಜಿಲ್ಲೆಯಲ್ಲಿ 18,855 ಹೆಕ್ಟರ್ ಭತ್ತ ನಷ್ಟವಾಗಿರುವ ಬಗ್ಗೆ ವರದಿಯಿದ್ದು, ಇನ್ನು ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಬೆಳೆ ವಿಮೆಗೆ ಸಂಬAಧಿಸದAತೆ 64,0351 ಕ್ಕೂ ಅಧಿಕ ರೈತರು ಇನ್ಸೂರೆನ್ಸ್ ಪಾವತಿಸಿದ್ದು, ವಿಮಾ ಪರಿಹಾರ ಮೊತ್ತವನ್ನು ರೈತರಿಗೆ ನೀಡಲು ಆಯಾ ಇನ್ಸೂರೆನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಒಟ್ಟಾರೆಯಾಗಿ ರೈತರಿಗೆ ಬೆಳೆ ನಷ್ಟ ಪರಿಹಾರ ಒದಗಿಸಲು ನ. 30 ರೊಳಗಾಗಿ ಸಂಬAಧಿಸಿದ ಎಲ್ಲಾ ಅಧಿಕಾರಿಗಳು ಸರ್ವೇ ಕಾರ್ಯವನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್ ಗಳಡಿ ತಕ್ಷಣ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದು, ಸರ್ಕಾರದ ಪರಿಹಾರ ಧನವನ್ನು ನೇರವಾಗಿ ರೈತರ ಖಾತೆಗೆ ಡೆಬಿಟ್ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಜಂಟಿ ಕೃಷಿ ನಿರ್ದೇಶಕ ಸದಾಶಿವ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Previous article“ಬಸ್ ಸೌಕರ್ಯಕ್ಕೆ,ಕಾಲೇಜು ಬಳಿ ವೇಗದೂತ ಬಸ್ ನಿಲುಗಡೆಗೆ ಒತ್ತಾಯ.”
Next article“ಪದ್ಮಶ್ರೀ ಜೋಗ್ತಿ ಪರಂಪರೆಗೆ ಸಂದ ಗೌರವ.”

LEAVE A REPLY

Please enter your comment!
Please enter your name here