25.2 C
Bellary
Friday, June 21, 2024

Localpin

spot_img

ಭಾರತ್ ಬ್ರ್ಯಾಂಡ್ ಅಕ್ಕಿಗೆ ಚಾಲನೆ

ಬೆಳಗಾಯಿತು ವಾರ್ತೆ / https://belagayithu.in

ಕೇಂದ್ರ ಸರ್ಕಾರದ ಭಾರತ್  ಬ್ರ್ಯಾಂಡ್ ಅಕ್ಕಿ (Bharat Brand Rice)ಯೋಜನೆಗೆ (ಫೆಬ್ರವರಿ 06) ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಈ ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು.  ಮತ್ತೊಂದೆಡೆ ವಸಂತ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ನೆಫೆಡ್ ಕಚೇರಿ ಮುಂಭಾಗದಲ್ಲಿ ಭಾರತ್ ಅಕ್ಕಿ ಮಾರಟ ವಾಹನಗಳಿಗೆ ಚಾಲನೆ ನೀಡಲಾಗಿದೆ. ಎಫ್‌ಸಿಐ ಚೆರ್ಮನ್ ಭೂಪೇಂದ್ರ ಸಿಂಗ್ ಬಾಟಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಒಟ್ಟು 7 ವಾಹನಗಳಿಗೆ ಚಾಲನೆ ನೀಡಿದರು.ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡದ ಬಳಿಕ ಮಾತನಾಡಿದ ಬಿಎಸ್​ವೈ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 29 ರೂಪಾಯಿಗೆ ಕೆಜಿ ಅಕ್ಕಿ, ಗೋದಿ 50 ರೂ., ಹೆಸರು ಕಾಳು 90 ರೂ., ತೊಗರಿ ಬೇಳೆ 60 ರೂ. ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹೆಮ್ಮೆ ಇದೆ. ದೇಶದ ಇತಿಹಾಸದಲ್ಲಿ ಬಡವರು ಮತ್ತು ಮಧ್ಯಮ ವರ್ಗಕ್ಕೆ ಯೋಜನೆ ತಲುಪಲಿದೆ. 

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles