ಸಿರುಗುಪ್ಪ: ನಗರದ ಮಹಾತ್ಮ ಗಾಂಧೀಜಿ ವೃತ್ತದಿಂದ ಬಳ್ಳಾರಿ ರಸ್ತೆಯ ಟ್ರೆಂಡ್ಸ್ ಕಾಂಪ್ಲೆಕ್ಸ್ನಲ್ಲಿರುವ ಶಾಪಿಂಗ್ ಮಾಲ್ಗಳವರೆಗೂ ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ನಗರಸಭೆಯ ಪೌರಾಯುಕ್ತ ರಾಘವೇಂದ್ರಗುರು ಅವರ ನೇತೃತ್ವದಲ್ಲಿ ವಿವಿಧ ಅಂಗಡಿಗಳು, ಬೀದಿಬದಿ ವ್ಯಾಪಾರಿಗಳು, ವಾಹನ ಸವಾರರು ಮತ್ತು ಪಾದಾಚಾರಿಗಳಿಗೆ ಕೊರೋನಾ ಜಾಗೃತಿಯೊಂದಿಗೆ ಮಾಸ್ಕ್ ಧರಿಸದೇ ವ್ಯವಹರಿಸುತ್ತಿದ್ದ ವರ್ತಕರಿಗೆ, ವಾಹನ ಸವಾರರಿಗೆ ದಂಡ ವಿಧಿಸಿದರು.
ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಮಾತನಾಡಿ ಕೊರೋನಾ ರೂಪಾಂತರ ತಳಿಯಾದ ಓಮಿಕ್ರಾನ್ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಅತಿ ವೇಗವಾಗಿ ಹರಡುತ್ತಿದ್ದು ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು ಎಲ್ಲರೂ ಕಡ್ಡಾಯವಾಗಿ ಲಸಿಕೆ, ಮಾಸ್ಕ್, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೊರೋನಾ ನಿಯಂತ್ರಿಸಲು ತಾಲೂಕು ಆಡಳಿತಕ್ಕೆ ಸಹಕರಿಸಬೇಕೆಂದು ತಿಳಿಸಿದರು.