ಬೆಳಗಾಯಿತು ವಾರ್ತೆ | www.belagayithu.in
ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ (Bharat Ratna) ಪ್ರಶಸ್ತಿಯನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಮತ್ತು ಬಿಜೆಪಿ ಧುರೀಣ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕಳೆದ ಒಂದು ತಿಂಗಳ ಹಿಂದೆ ಕೇಂದ್ರವು ಭಾರತ ರತ್ನ ಘೋಷಿಸಿದ ನಂತರ ಈ ಘೋಷಣೆ ಮಾಡಲಾಗಿದೆ. ಸರ್ಕಾರವು ಒಂದು ತಿಂಗಳ ಅವಧಿಯಲ್ಲಿ 5 ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದೆ.