ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿಯ ಯುವಕ ಅನಿರುದ್ದ ಕಟ್ಟಿಮನಿ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ 786 ರ್ಯಾಂಕ್ ನಲ್ಲಿ ಉತ್ತೀರ್ಣರಾಗಿ ಬಳ್ಳಾರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಬಹಳಷ್ಟು ಕಷ್ಟದ ಪರಿಶ್ರಮದಿಂದ ಸತತ ಅಭ್ಯಾಸ ಮಾಡಿ ಯುಪಿಎಸ್ ಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದಾರೆ.
ಇವರ ಸಾಧನೆಗೆ ಅವರ ತಂದೆ, ತಾಯಿಗಳು ಹರ್ಷವ್ಯಕ್ತ ಪಡಿಸಿದ್ದಾರೆ.
ನಮ್ಮ ಮಗನ ಸಾಧನೆ ನೋಡಿ ಬಹಳ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.





