7.3 C
New York
Monday, December 5, 2022

Buy now

spot_img

ವಂದೇ ಭಾರತ್ ೨.೦ ಎಕ್ಸ ಪ್ರೆಸ್ ರೈಲನ್ನು ಲೋಕಾರ್ಪಣೆಗೊಳಿಸಿದ ಮೋದಿ

ಗಾಂಧಿನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಂದೇ ಭಾರತ್ ೨.೦ ಎಕ್ಸ ಪ್ರೆಸ್ ರೈಲನ್ನು ಗುಜರಾತಿನ ಗಾಂಧಿನಗರದಲ್ಲಿ ಲೋಕಾರ್ಪಣೆಗೊಳಿಸಿದರು.

ಬೆಳಗ್ಗೆ ೧೦:೩೦ರ ಸುಮಾರಿಗೆ ಗಾಂಧಿನಗರ ರಾಜಧಾನಿ ರೈಲು ನಿಲ್ದಾಣದಿಂದ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ನಂತರ ಅವರು ಅಹಮದಾಬಾದ್‌ನ ಗಾಂಧಿನಗರ ಮತ್ತು ಕಲುಪುರ್ ರೈಲು ನಿಲ್ದಾಣದ ನಡುವೆ ಪ್ರಯಾಣಿಕರೊಟ್ಟಿಗೆ ಪ್ರಯಾಣ ಬೆಳೆಸಿದದರು.

ಮಹಾರಾಷ್ಟç ಮತ್ತು ಗುಜರಾತ್‌ನ ರಾಜಧಾನಿ ನಗರಗಳನ್ನು ಸಂಪರ್ಕಿಸುವ ಈ ರೈಲು ದೇಶದ ಮೂರನೇ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದೆ. ಮೊದಲ ರೈಲು ಹೊಸದಿಲ್ಲಿ-ವಾರಣಾಸಿ ಮಾರ್ಗದಲ್ಲಿ ಪ್ರಾರಂಭಿಸಿದರೆ, ಎರಡನೆಯದು ಹೊಸದಿಲ್ಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಪ್ರಾರಂಭವಾಗಿದೆ.
ಈ ರೈಲು ಪ್ರಯಾಣಿಕರಿಗೆ ವಿಮಾನದಂತಹ ಪ್ರಯಾಣದ ಅನುಭವ ಮತ್ತು ಕವಚ್ ತಂತ್ರಜ್ಞಾನ ಸೇರಿದಂತೆ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರೈಲು ಇದಾಗಿದ್ದು, ರೈಲುಗಳ ನಡುವೆ ಅಪಘಾತ ತಪ್ಪಿಸುವ ವ್ಯವಸ್ಥೆ ಇದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles