ವಿವಿಸಾಗರ ಜಲಾಶಯದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಸಿಎಂ

0
417

ಚಿತ್ರದುರ್ಗ: ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರಿನ ಸಂಗ್ರಹ ಹಾಗೂ ಜಲಾಶಯದ ಸಾಮರ್ಥ್ಯದ ಕುರಿತು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಂದ ಮಾಹಿತಿ ಪಡೆದರು.
ಸತತವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವೀಡಿಯೋ ಸಂವಾದದಲ್ಲಿ ಅವರು ಚಿತ್ರದುರ್ಗ ಜಿಲ್ಲೆಗೆ ಸಂಬAಧಪಟ್ಟAತೆ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಮಳೆಯ ಪ್ರಮಾಣ, ಜೀವಹಾನಿ, ಮನೆ ಹಾನಿ, ಜಾನುವಾರು ಹಾನಿ ಹಾಗೂ ಬೆಳೆಗಳ ಹಾನಿಗೆ ಸಂಬAಧಿಸಿದAತೆ ಮಾಹಿತಿ ಪಡೆದುಕೊಂಡರು. ಇನ್ನು ಇದೇ ವೇಳೆ ವಿವಿಸಾಗರದ ಜಲಾಶಯ ಮಟ್ಟದ ಬಗ್ಗೆಯೂ ಸಹ ಮಾಹಿತಿ ಪಡೆದರು.

ಇನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 166 ಕೆರೆಗಳು ಇದ್ದು, ಅದರಲ್ಲಿ 22 ಕೆರೆಗಳು ತುಂಬಿದ್ದು, ಇನ್ನೂ 36 ಕೆರೆಗಳು ಶೇ.50ರಷ್ಟು ಭರ್ತಿಯಾಗಿದೆ. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ 47 ಕಿ.ಮೀನಷ್ಟು ರಸ್ತೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here