ಶಾಲಾ, ಕಾಲೇಜುಗಳಲ್ಲಿ ವ್ಯಾಕ್ಸೀನ್ ವ್ಯವಸ್ಥೆ ಮಾಡಿ : ವಿಕಾಸ್ ಕಿಶೋರ್ ಸುರಳ್ಕರ್

0
249

ಕೊಪ್ಪಳ: 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಪ್ರಕ್ರಿಯೆ 2022ರ ಜನವರಿ 03 ರಿಂದ ಪ್ರಾರಂಭಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಕ್ಸೀನ್ ವ್ಯವಸ್ಥೆ ಮಾಡಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕಾ ಕಾರ್ಯಕ್ರಮ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಡಿ.29) ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
2007ರ ಮೊದಲು ಜನಿಸಿದ ಅಂದರೆ 2006ರ ಡಿಸೆಂಬರ್ 31 ರೊಳಗೆ ಜನಿಸಿದ 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳು ಕೋವಿಡ್-19 ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದು, ಈ ವಯಸ್ಸಿನ ಪ್ರೌಢ ಶಾಲೆ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ವಿಧ್ಯಾಭ್ಯಾಸದಿಂದ ಖಾಲಿ ಉಳಿದಿರುವ ಯಾವುದೇ ಮಕ್ಕಳು ಕೋವಿಡ್ ಲಸಿಕೆಯಿಂದ ವಂಚಿತರಾಗಬಾರದು.

ಲಸಿಕೆ ಪಡೆಯುವ ಮಕ್ಕಳು ಯಾವೆಲ್ಲ ಪ್ರಮಾಣಪತ್ರಗಳನ್ನು ಹೊಂದಿರಬೇಕು?

ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಇತರೆ, ಮಕ್ಕಳ ವಯಸ್ಸನ್ನು ಖಚಿತಪಡಿಸಲು ವಿದ್ಯಾರ್ಹತೆ, ಆಧಾರ್ ಕಾರ್ಡ್ ಅಥವಾ ಇನ್ನಿತರೆ ಪ್ರಮಾಣಪತ್ರಗಳನ್ನು ಹೊಂದಿರಬೇಕು.

15 ರಿಂದ 18 ವರ್ಷದೊಳಗಿನ ಮಕ್ಕಳ ಪೈಕಿ ಪ್ರೌಢ ಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವ್ಯಾಕ್ಸೀನ್ ನೀಡುವುದಕ್ಕೆ ಸಂಬAಧಿಸಿದAತೆ ಲಸಿಕೆಗಾಗಿ ಅರ್ಹರಿರುವ 9ನೇ ತರಗತಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಹಾಗೂ 10ನೇ ತರಗತಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡುವುದರ ಜೊತೆಗೆ ಲಸಿಕೆ ನೀಡುವ ವ್ಯವಸ್ಥೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್‌ರವರು, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Previous articleಕನಿಷ್ಟ ಮಟ್ಟಕ್ಕೆ ಜಾರಿತು ದೆಹಲಿಯಲ್ಲಿ ಗಾಳಿಯ ಗುಣಮಟ್ಟ..
Next article“ಮತದಾರರು ಅಭಿವೃದ್ಧಿಗೆ ಮತಚಲಾಯಿಸಿದ್ದಾರೆ.”

LEAVE A REPLY

Please enter your comment!
Please enter your name here