29.1 C
Bellary
Monday, June 3, 2024

Localpin

spot_img

ಸಚಿವ ನಾಗೇಂದ್ರ ನೇತೃತ್ವದಲ್ಲಿ ಕೆಡಿಪಿ ಸಭೆ

ಬಳ್ಳಾರಿ: ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಶನಿವಾರ ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ನಾಗೇಂದ್ರ ಅವರು ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ( 20 ಅಂಶ ಸೇರಿದಂತೆ) ಏ.1ರಿಂದ ಅದು.31ರ ವರೆಗಿನ ಎರಡನೇ (ವಾರ್ಷಿಕ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು   ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ದೇವರಾಜ ಅರಸ್ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 20 ಫಲಾನುಭವಿಗಳಂತೆ ಒಟ್ಟು 80 ಕೊಳವೆ ಬಾವಿಗಳನ್ನು ಕೊರೆದು ವಿದ್ಯುತ್ ಸೌಲಭ್ಯ ಕಲ್ಪಿಸಿದೆ.20-21 ನೇ ಸಾಲಿನ ಫಲಾನುಭವಿಗಳು ಆಯ್ಕೆ ಆಗಿಲ್ಲ, 22, 23 ನೇ ಸಾಲಿನ ಫಲಾನು ಭವಿಗಳ ಆಯ್ಕೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರು ಸಭೆಗೆ ಹಾಜರಾಗದ ಕಾರಣ ಅವರನ್ನು ಅಮಾನತು ಮಾಡುವಂತೆ ಡಿಸಿಗೆ ಸಚಿವ ನಾಗೇಂದ್ರ ಅವರು ಸೂಚನೆ ನೀಡಿದರು.ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ನಾಗೇಂದ್ರ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಗಣೇಶ್, ಶಾಸಕ ಸಿಎಂ ನಾಗರಾಜ್, ಎಸ್ಪಿ ರಂಜಿತ್ ಕುಮಾರ್ ಭಂಡಾರು, ಸಿಇಒ ರಾಹುಲ್ ಶರಣಪ್ಪ ಸಂಕನೂರ್, ಎಸಿಎಫ್ ಸಂದೀಪ್ ಸೂರ್ಯವಂಶಿ ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles