13.3 C
New York
Wednesday, October 27, 2021

Buy now

spot_img

ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯುವಂತೆ ಕ್ರಮ ಕೈಗೊಳ್ಳಿ: ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು ಆಗಸ್ಟ್ 28 ಮತ್ತು 29 ರಂದು ಜಿಲ್ಲೆಯ 09 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3,600 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸೂಚಿಸಿದರು.
ಗುರುವಾರದಂದು(ಆ.26) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಅಂಗವಾಗಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಿಇಟಿ ಪರೀಕ್ಷಾ ದಿನದಂದು ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರ ಎಲೆಕ್ಟಾçನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಮಾತನಾಡಿ, ಪರೀಕ್ಷಾ ಕೇಂದ್ರದಲ್ಲಿ ಮುಂಚಿತವಾಗಿ ಸ್ಯಾನಿಟೈಸರ್ ಸಿಂಪರಣೆ ಮಾಡಬೇಕು. ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕಾö್ಯನಿಂಗ್ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಸುಗಮ ಪರೀಕ್ಷೆಗಳನ್ನು ನಡೆಸಬೇಕು. ಇದುವರೆಗೂ ಒಂದು ಬಾರಿಯೂ ಕೋವಿಡ್ ಲಸಿಕೆ ಪಡೆಯದವರು ಶೀಘ್ರ ಲಸಿಕೆ ಪಡೆದುಕೊಂಡು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಮತ್ತು ಪ್ರಾಚಾರ್ಯರು, ಉಪನ್ಯಾಸಕರು ಲಸಿಕೆಯನ್ನು ಕಡ್ಡಾಯವಾಗಿ ಮೊದಲನೇ ಹಾಗೂ ಎರಡನೇಯ ಡೋಸ್ ಪಡೆದಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರವಿಕುಮಾರ ಬಿ.ಜಿ. ಮಾತನಾಡಿ, ಸಿಇಟಿ ಪರೀಕ್ಷೆ ಆ.28 ರಂದು ಬೆಳಿಗ್ಗೆ 10-30 ರಿಂದ 11-50 ರವರೆಗೆ ಜೀವಶಾಸ್ತç, ಮಧ್ಯಾಹ್ನ 2-30 ರಿಂದ 3-50 ರವರೆಗೆ ಗಣಿತಶಾಸ್ತç ವಿಷಯದ ಪರೀಕ್ಷೆ ನಡೆಯಲಿದೆ. ಆ.29 ರಂದು ಬೆಳಿಗ್ಗೆ 10-30 ರಿಂದ 11-50 ರವರೆಗೆ ಭೌತಶಾಸ್ತç, ಮಧ್ಯಾಹ್ನ 2-30 ರಿಂದ 3-50 ರವರೆಗೆ ರಸಾಯನಶಾಸ್ತç ವಿಷಯದ ಪರೀಕ್ಷೆ ನಡೆಯಲಿದೆ. ಕೊಪ್ಪಳದ ಗವಿಸಿದ್ದೇಶ್ವರ ಪಿಯು ಕಾಲೇಜು, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಪಿಯು ಕಾಲೇಜು, ನವಚೇತನ ಪ.ಪೂ ಕಾಲೇಜು ಭಾಗ್ಯನಗರ, ಗಂಗಾವತಿಯ ಎಸ್.ಎಮ್.ಎನ್.ಎಮ್ ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜು, ಬಾಲಕರ ಸರ್ಕಾರಿ ಪ.ಪೂ ಕಾಲೇಜು, ಲಯನ್ಸ್ ಕಾಂಪೋಸಿಟ್ ಪ.ಪೂ ಕಾಲೇಜು ಹಾಗೂ ಹೆಚ್.ಆರ್.ಸರೋಜಮ್ಮ ಪ.ಪೂ ಕಾಲೇಜು ಸೇರಿದಂತೆ 09 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
2,996FollowersFollow
0SubscribersSubscribe
- Advertisement -spot_img

Latest Articles