ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಒಳ ಚರಂಡಿ ಬಗ್ಗೆ ಮಾಹಿತಿ ಪಡೆಯಲು ಬಳ್ಳಾರಿಗೆ ಬಂದಿದ್ದೇನೆ. ಸ್ಥಳೀಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಬಳ್ಳಾರಿ ನಗರ ಮತ್ತು ತಾಲೂಕುಗಳಲ್ಲಿ ಯಾವ ಸಮಸ್ಯೆ ಹೆಚ್ಚಿದೆ ಅದನ್ನ ಪರಿಹರಿಸಲು ಸೂಚನೆ ನೀಡುತ್ತೇನೆ.
ಕೆಎಮ್ ಆರ್ ಸಿ ಯಲ್ಲಿ ಇರುವ ಫಂಡ್ ಯಾವ ರೀತಿ ಬಳಕೆ ಮಾಡಬಹುದು ಎಂಬ ಬಗ್ಗೆ ಮೀಟಿಂಗ್ ಮಾಡಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಗ್ರಾಮಾಂತರ ಶಾಸಕ ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.





