ಬೆಳಗಾಯಿತು ವಾರ್ತೆ / https://belagayithu.in
ಅಡ್ವಾಣಿ ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಡಿಕೆಶಿ ಆಗ್ರಹಿಸಿದರು.
ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಡಿಕೆಶಿ ಆಗ್ರಹಿಸಿದರು. ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಒತ್ತಾಸೆ ಎಂದು ಶಿವಕುಮಾರ್ ಹೇಳಿದರು.