ಚಿತ್ರದುರ್ಗ: ಭಾರತ ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ ಮಹನೀಯರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ “ಸ್ವಾತಂತ್ರö್ಯ ಹೋರಾಟದಲ್ಲಿ ಚಿತ್ರದುರ್ಗದ ಕೊಡುಗೆ ಹಾಗೂ ಮಾಧ್ಯಮಗಳ ಪಾತ್ರ” ಕುರಿತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರö್ಯ ದೊರೆತು 75 ವರ್ಷಗಳು ಸಂದಿರುವ ಶುಭ ಸಂದರ್ಭದ ಸವಿನೆನಪಿನಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ್” ಕಾರ್ಯಕ್ರಮವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಜ್ಯದಲ್ಲಿಯೂ “ಅಜಾದ್ ಕಾ ಅಮೃತ್ ಮಹೋತ್ಸವ” ಆಚರಣೆಯನ್ನು 2021ರ ಮಾರ್ಚ್ 12 ರಿಂದ 2023ರ ಆಗಸ್ಟ್ 15 ರವರೆಗೆ ಆಚರಿಸಲು ತೀರ್ಮಾನಿಸಿದ್ದು, ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಳ್ಳಿಗಳ ಮೂಲೆ ಮೂಲೆಗಳಲ್ಲಿರುವ ಸ್ವಾತಂತ್ರö್ಯ ಹೋರಾಟಗಾರರನ್ನು ಗುರುತಿಸಬೇಕು. ಗ್ರಾಮೀಣ ಪ್ರದೇಶದ ಹಲವರನ್ನು ಇದು ತಲುಪಬೇಕು ಎಂಬುದು ಪ್ರಧಾನಮಂತ್ರಿಯವರ ಆಶಯವಾಗಿದೆ ಎಂದರು.
ಸ್ವಾತಂತ್ರö್ಯದ ಇತಿಹಾಸ ಯುವ ಜನಾಂಗಕ್ಕೆ ತಿಳಿಸಬೇಕು. ದೇಶಾಭಿಮಾನ, ದೇಶದ ಏಕತೆ ಮತ್ತು ದೇಶದ ಅಭಿವೃದ್ಧಿಯತ್ತ ಯುವಜನತೆಯನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ 75ನೇ ವರ್ಷದ ಸ್ವಾತಂತ್ರೊö್ಯÃತ್ಸವದ ವರ್ಷಾಚರಣೆ ಹಮ್ಮಿಕೊಂಡಿದೆ. ಈ ಹಿನ್ನಲೆಯಲ್ಲಿ ಸ್ವಾತಂತ್ರö್ಯ ಚಳುವಳಿಯಲ್ಲಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರö್ಯ ಹೋರಾಟಗಾರಿಗೆ ಸಂಬAಧಿಸಿದAತೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯ ಚಿತ್ರ ಸ್ಪರ್ಧೆ, ರಸಪ್ರಶ್ನೆ ಸೇರಿದಂತೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಹೇಳಿದರು.
ನಾಡು-ನುಡಿ, ಕಲೆ ಸಂಸ್ಕೃತಿ, ಸ್ಮಾರಕ, ಕಟ್ಟಡಗಳು ಇವುಗಳ ಮೌಲ್ಯದ ಬಗ್ಗೆ ಯುವಜನರಿಗೆ ತಿಳಿವಳಿಕೆ ಮೂಡಿಸಬೇಕು. ಸ್ಮಾರಕಗಳ ಸಂರಕ್ಷಣೆ ಜೊತೆಗೆ ಅಂತರಾಷ್ಟಿçÃಯ ಮಟ್ಟದಲ್ಲೂ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದರು.