ಬೆಳಗಾಯಿತು ವಾರ್ತೆ / https://belagayithu.in
ಮಂಗಳೂರು, ಫೆ.08: ಹಾಸ್ಟೆಲ್ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.