ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಬಳ್ಳಾರಿ ನಗರದ ಸೆಕೆಂಡ್ ಗೇಟ್ ಸಮೀಪ ರೈಲು ಹಳಿ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರೈಲ್ವೆ ಗೇಟ್ ಮುಚ್ಚಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ರೈಲ್ವೆ ಹಳಿ ನಿರ್ವಹಣೆ ಮತ್ತು ತಾಂತ್ರಿಕ ಕಾಮಗಾರಿಗಳನ್ನು ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಗೇಟ್‌ನಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ಗೇಟ್ ಮೂಲಕ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.
ಆದ್ದರಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಚರಿಸುವ ವಾಹನ ಸವಾರರು ಮತ್ತು ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ. ಗೇಟ್ ಬಂದ್ ಇರುವ ಕಾರಣ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕಾಮಗಾರಿ ಪೂರ್ಣಗೊಂಡ ಬಳಿಕ ಸಂಜೆ 4 ಗಂಟೆಯ ನಂತರ ಎಂದಿನಂತೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಇಲಾಖೆ ತಿಳಿಸಿದೆ.





