36.2 C
Bellary
Wednesday, May 15, 2024

Localpin

spot_img

ಸಹಾಯಕ ಪ್ರಾಧ್ಯಾಪಕರ 7000 ಹುದ್ದೆ ಭರ್ತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ

ಬೆಳಗಾಯಿತು ವಾರ್ತೆ / https://belagayithu.in

ರಾಜ್ಯದಾದ್ಯಂತ ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಬರೋಬರಿ 7000 ಪೋಸ್ಟ್‌ಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.ಇತ್ತೀಚಿನ 5 ವರ್ಷಗಳಲ್ಲಿ ಕಾಲೇಜುಗಳ ಸಂಖ್ಯೆ ಜತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ. ಹೊಸ ಕೋರ್ಸ್‌ಗಳು ಸಹ ಆರಂಭವಾಗಿವೆ. ಆದರೆ ಇವುಗಳ ಬೋಧನೆಗೆ ಅಗತ್ಯ ಬೋಧಕರು ಮತ್ತು ಸಿಬ್ಬಂದಿಗಳ ಕೊರತೆ ಇದ್ದು, ನೇಮಕ ಮಾಡಿಲ್ಲ. ಆದ್ದರಿಂದ ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ್ದಾರೆ.

ಕಳೆದ ಬಿಜೆಪಿ ಸರ್ಕಾರದಲ್ಲಿ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರದಲ್ಲಿ 7000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಕುರಿತು ಶಿಕ್ಷಣ ಸಚಿವರು ಹೇಳಿದ್ದಾರೆ. ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ ಜತೆಗೆ ಎನ್‌ಇಟಿ, ಕೆಎಸ್‌ಇಟಿ, ಪಿಹೆಚ್‌ಡಿ ಪಾಸ್ ಮಾಡಿರಬೇಕು. ಇವರು ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಬಹುದು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles