ಬೆಳಗಾಯಿತು ವಾರ್ತೆ / https://belagayithu.in
ನವದೆಹಲಿ, ಫೆಬ್ರವರಿ 7 : ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು. ಬುಧವಾರ ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ತಿಳಿಸಿದರು.
ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ