ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕೇಸ್ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿಯೇ ಯುವಕ ರಾಜಶೇಖರ್ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್ನಿಂದ ರಾಜಶೇಖರ್ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್ಮ್ಯಾನ್ ಕೂಡ ಬಳಸಿರೋದು ಇದೇ ಗನ್ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ 5 ಗನ್ಗಳನ್ನು ಬ್ರೂಸ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಓರ್ವ ಗನ್ಮ್ಯಾನ್ನನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ನಾಲ್ವರು ಎಸ್ಕೇಪ್ ಆಗಿದ್ದಾರೆ.





