ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಸ್ಚಚ್ಛವಾಗಿರಲು ಪೌರ ಕಾರ್ಮಿಕರೆ ಮುಖ್ಯ ಕಾರಣವಾಗಿರುತ್ತಾರೆ. ಇವರ ಜೀವನ ನಿರ್ವಹಣೆ ಗೆ ಅನುಕೂಲ ವಾಗುವ ದೃಷ್ಟಿಯಿಂದ ಸರ್ಕಾರ 132 ಜನ ಪೌರ ಕಾರ್ಮಿಕರ ನೇಮಕಾತಿ ಪತ್ರ ನೀಡುವುದರ ಜತೆಗೆ ಎಲ್ಲ ಪೌರ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸಿದೆ ಎಂದು ಕ್ರೀಡಾ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.
ನಗರದ ಮಹಾನಗರ ಪಾಲಿಕೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ನೇಮಕಾತಿ ಆದೇಶ ಪತ್ರ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೌರ ಕಾರ್ಮಿಕರು ಪ್ರತಿ ನಿತ್ಯ ನಗರವನ್ನು ಸ್ವಚ್ಛವಾಗಿಟ್ಟು ನಗರ ಸುಂದರವಾಗಿಡಲು ಹಗಲು ರಾತ್ರಿ ಕೆಲಸ ಮಾಡುತ್ತಾರೆ. ಅಂತಹ ಕಾರ್ಮಿಕರಿಗೆ ಭದ್ರತೆ ಒದಗಿಸುವುದು ಸರ್ಕಾರದ ಹೊಣೆಯಾಗಿದೆ. ಹಾಗಾಗಿ ಇಂದು ಪೌರ ಕಾರ್ಮಿಕರಿಗೆ ಸೇವಾ ಭದ್ರತೆ ನೀಡುವ ಜತೆಗೆ 132 ಜನರನ್ನು ಖಾಯಂಗೊಳಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸೇರಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.