ವಿಕಸಿತ ಭಾರತ 2047 ನಿರ್ಮಾಣಕ್ಕೆ ಮಹಾಸಂಕಲ್ಪ

ಬೆಳಗಾಯಿತು ವಾರ್ತೆ
ಬಳ್ಳಾರಿ: ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರೈಸುವ 2047ರ ವೇಳೆಗೆ, ಯುವ ಜನತೆ ದೇಶವನ್ನು ವಿಕಸಿತ ಭಾರತವನ್ನಾಗಿ ನಿರ್ಮಿಸುವ ಮಹಾಸಂಕಲ್ಪದಲ್ಲಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಕರೆ ನೀಡಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ 2024-25ನೇ ಸಾಲಿನ 14ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವಿಶ್ವವಿದ್ಯಾಲಯವು ಕೇವಲ ಇಟ್ಟಿಗೆ ಮತ್ತು ಕಲ್ಲುಗಳಿಂದ ನಿರ್ಮಿತವಾದ ಕಟ್ಟಡವಲ್ಲ, ಬದಲಿಗೆ ಮಹಾನ್ ಸಾಮ್ರಾಟ್ ರಾಜ ಕೃಷ್ಣದೇವರಾಯರು ಕಲೆ, ಸಾಹಿತ್ಯ, ವಾಸ್ತುಶಿಲ್ಪ ಹಾಗೂ ಲೋಕಕಲ್ಯಾಣದ ಸ್ವರ್ಣಯುಗವನ್ನು ಸೃಷ್ಟಿಸಿದ ಐತಿಹಾಸಿಕ ಮತ್ತು ಗೌರವಶಾಲಿ ನೆಲದಲ್ಲಿದೆ. 2010ರಲ್ಲಿ ತನ್ನ ಸ್ಥಾಪನೆಯಾದಾಗಿನಿಂದ ಈ ವಿಶ್ವವಿದ್ಯಾಲಯವು ಕಡಿಮೆ ಸಮಯದಲ್ಲಿ ಉನ್ನತ ಸಾಧನೆಗಳನ್ನು ಮಾಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಲಸಚಿವ ಪ್ರೊ. ವಿ. ಲೋಕೇಶ್ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ಪಿ. ಕಣ್ಣನ್ ಸೇರಿದಂತೆ ವಿವಿಯ ಎಲ್ಲಾ ನಿಕಾಯಗಳ ಡೀನರು, ಮುಖ್ಯಸ್ಥರು, ವಿವಿಧ ಮಹಾವಿದ್ಯಾಲಯದ ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
***

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles