ಸಂಚಾರಿ ವಿಜಯ್ ನಿಧನ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

0
306

ರಾಷ್ಟ್ರಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ. ವಿಜಯ್ ನಿಧನಕ್ಕೆ ಅಭಿಮಾನಿಗಳು, ಸ್ಯಾಂಡಲ್ ವುಡ್ ಗಣ್ಯರು ಮತ್ತು ರಾಜಕೀಯ ಗಣ್ಯರು ಸಹ ಟ್ವೀಟ್ ಮಾಡಿ ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸುವ ಮೂಲಕ ಕನ್ನಡತನ ಮೆರೆದಿದೆ. ಅಮೆರಿಕ ರಾಯಭಾರ ಕಚೇರಿ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, “ರಾಷ್ಟ್ರ ಪ್ರಶಸ್ತಿ ವಿಜೇತ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ತಿಂಗಳ ಆಚರಣೆಯ ಅಂಗವಾಗಿ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. ಎಂದು ಹೇಳಿದ್ದಾರೆ.

ಈ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ನಮ್ಮ ದೇಶದವರೇ ಹೀಗೆ ಸಾಮಾನ್ಯ ಜನರಿಗೆ ಅರ್ಥವಾಗುವ ಹಾಗೆ ಹಾಕುವುದಿಲ್ಲ. ಕನ್ನಡದಲ್ಲಿ ಟ್ವೀಟ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ಹೇಳುತ್ತಿದ್ದಾರೆ.

Previous articleರಾಜ್ಯದಲ್ಲಿ ಕೋವಿಡ್ ನ ಹೊಸ 8,249 ಪ್ರಕರಣಗಳು, 159 ಮಂದಿ ಸಾವು ವರದಿ
Next articleಮೆಣಸಿನಕಾಯಿ ಬೀಜಕ್ಕಾಗಿ ಪಟ್ಟು ಹಿಡಿದ ರೈತ ಮಹಿಳೆಯರು

LEAVE A REPLY

Please enter your comment!
Please enter your name here