ಚಂಡೀಗಡ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಸ್ಲಿಂ ಹುಡುಗಿಯ ವಿವಾಹದ ವಯಸ್ಸನ್ನು 16 ವರ್ಷಕ್ಕೆ ನಿಗದಿಪಡಿಸಿದ್ದು, 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಳ್ಳಬಹುದು ಎಂದು ತೀರ್ಪು ನೀಡಿದೆ. ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್ಕೋಟ್ ಮೂಲದ ಮುಸ್ಲಿಂ ದಂಪತಿಯ ಮನವಿಯ ಮೇರೆಗೆ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಇಸ್ಲಾಮಿಕ್ ಶರಿಯಾ ನಿಯಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಬೇಡಿ, ಮುಸ್ಲಿಂ ಹುಡುಗಿಯ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನಿಂದ ನಿಯಂತ್ರಿಸಲಾಗುತ್ತದೆ ಎಂದು ಹೇಳಿದರು.
“ಅರ್ಜಿದಾರರು ತಮ್ಮ ಕುಟುಂಬದ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು ಭಾರತದ ಸಂವಿಧಾನದಲ್ಲಿ ಕಲ್ಪಿಸಿದಂತೆ ಅವರ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ”
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್